DAKSHINA KANNADA
ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನ – ಇಬ್ಬರು ಅರೆಸ್ಟ್
ಪುತ್ತೂರು ಅಗಸ್ಟ್ 10: ನಿಷೇಧಿತ ಡ್ರಗ್ಸ್ ಎಂಡಿಎಂಎ ನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24) ಹಾಗೂ ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮುಹಮ್ಮದ್ ಆಸೀಫ್ ಬಿ. (21) ಹಾಗೂ ಸಿನಾನ್ ಎಂದು ಗುರುತಿಸಲಾಗಿದೆ.
ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ಬಂದ ಆಟೋ ರಿಕ್ಷಾ ತಪಾಸಣೆಗೆ ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಆರೋಪಿಗಳು ಆಟೋ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಹಿಡಿದ ಪೊಲೀಸರು ವಿಚಾರಣೆ ನಡೆಸಿದಾಗ ಆಟೋ ರಿಕ್ಷಾದಲ್ಲಿ ಸುಮಾರು 18,720 ರೂ ಮೌಲ್ಯದ 9.36 ಗ್ರಾಂ ನಿಷೇದಿತ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು 15 ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್ಗಳು ಪತ್ತೆಯಾಗಿರುತ್ತದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 94/2024 ಕಲಂ: U/s 8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ ಮತ್ತು ಕಲಂ: 3(5) BNS 2023 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.
You must be logged in to post a comment Login