Connect with us

    LATEST NEWS

    ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ – ಆರೋಪಿ ಅರೆಸ್ಟ್

    ಮಂಗಳೂರು ಮೇ 15: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ.


    ಬಂಧಿತ ಆರೋಪಿಯನ್ನು ದಾವೂದು ಪರ್ವೇಜ್ ಎಂದು ಗುರುತಿಸಲಾಗಿದೆ. ಆತನಿಂದ ನಿಷೇದಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ MDMA (ಅಂದಾಜು ಮೌಲ್ಯ 15,000) ಹಾಗೂ 810 ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯಲ್ಲಿ ಶ್ರೀಮತಿ ಧನ್ಯ.ಎನ್.ನಾಯಕ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗರವರ ನೇತೃತ್ವದ Anti-Drug Team ನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್‍ ಠಾಣಾ ಪಿಎಸ್‍ಐ ಅರುಣ್‍ ಕುಮಾರ್‍ ಡಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

    Share Information
    Advertisement
    Click to comment

    You must be logged in to post a comment Login

    Leave a Reply