ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ.
ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು ಮಹಾಶಿವರಾತ್ರಿಯ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.
ಗ್ರೇಟರ್ ಬೆಂಗಳೂರು ಅಥಾರಿಟಿ ಆದೇಶದ ಪ್ರಕಾರ ಮಹಾಶಿವರಾತ್ರಿಯಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ನಾಗರಿಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದ್ದಾರೆ.