Connect with us

    LATEST NEWS

    ಅನುಮತಿ ಇಲ್ಲದೆ ಮೆಡಿಕಲ್ ಕಾಲೇಜಿಗೆ ವಿಧ್ಯಾರ್ಥಿಗಳ ದಾಖಲಾತಿ – ಜಿಆರ್ ಮೆಡಿಕಲ್ ಕಾಲೇಜಿಗೆ ವಿಧ್ಯಾರ್ಥಿಗಳ ಮುತ್ತಿಗೆ….!!

    ಮಂಗಳೂರು, ಸೆಪ್ಟೆಂಬರ್ 4: ಸರಕಾರದ ಅನುಮತಿ ಇಲ್ಲದೆ ಮೆಡಿಕಲ್ ಕಾಲೇಜು ಆರಂಭಿಸಿ ನೂರಾರು ವಿಧ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಮಾರಾಟ ಮಾಡಿದ ಆರೋಪ ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿನ ಮೇಲೆ ಕೇಳಿ ಬಂದಿದ್ದು, ಇದೀಗ ಸಂತ್ರಸ್ಥ ವಿಧ್ಯಾರ್ಥಿಗಳು ಪೋಷಕರೊಂದಿಗೆ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.


    ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಆರಂಭವಾಗಿರುವ ಗಣೇಶ್ ರಾವ್ ಮಾಲೀಕತ್ವದ ಜಿ.ಆರ್.ಮೆಡಿಕಲ್ ನಲ್ಲಿ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅನುಮತಿ‌ ಇಲ್ಲದೇ ಸೀಟು ನೀಡಿರುವುದು ಅಕ್ರಮ ಮತ್ತು ಕಾನೂನು ಬಾಹಿರ ಎಂದು ವರದಿಯಾಗಿದೆ. 2022-23 ಸಾಲಿಗೆ 150 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ದಾಖಲಾತಿ ಮಾಡಿಕೊಂಡಿದ್ದರು. 2021-22ರಲ್ಲಿ ಎಂಎಆರ್​ಬಿ ಮೆಡಿಕಲ್ ಕಾಲೇಜು ನಡೆಸಲು ಅನುಮತಿ ನೀಡಿತ್ತು.


    ಆದರೆ 2022ರ ಸೆಪ್ಟೆಂಬರ್​ನಲ್ಲಿ ಎಂಎಆರ್​ಬಿ ತಂಡ ಕಾಲೇಜಿನಲ್ಲಿ ಪರಿಶೀಲನೆ ನಡೆಸಿತ್ತು. ಈ ವೇಳೆ ಕಾಲೇಜಿನಲ್ಲಿ ರಿಸರ್ಚ್ ಸೆಂಟರ್ ಅಗತ್ಯ ಮಾನದಂಡ ಮತ್ತು ನುರಿತ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಎರಡನೇ ಬ್ಯಾಚ್​ನಲ್ಲಿ MBBS ದಾಖಲಾತಿಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಕಾನೂನು ಬಾಹಿರವಾಗಿ ಕೋಟ್ಯಾಂತರ ರೂ. ಶುಲ್ಕ ಪಡೆದು 150 ಮಂದಿಗೆ ಸೀಟು ಹಂಚಿಕೆ ಮಾಡಲಾಗಿತ್ತು. ಹೀಗಾಗಿ ಕಾಲೇಜು ಮುಖ್ಯಸ್ಥ ಗಣೇಶ್ ರಾವ್ ಸ್ಥಳಕ್ಕೆ ಬರುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಭದ್ರತೆ ಕಲ್ಪಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply