LATEST NEWS
ಮಾವಿನಕಟ್ಟೆ -ಮೆಡಿಕಲ್ ಶಾಪ್ ನಲ್ಲಿದ್ದ ಯುವತಿಗೆ ಹಲ್ಲೆ ಮಾಡಿದ ಮಹಿಳೆ ಅರೆಸ್ಟ್

ಕುಂದಾಪುರ ಜೂನ್ 10: ಮಾವಿನಕಟ್ಟೆ ಎಂಬಲ್ಲಿ ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಹಿನ್ನಲೆ ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.

ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ ಕೊಟ್ಟಳು. ಚಿಲ್ಲರೆ ಇಲ್ಲ, ಕೊಡಿ ಎಂದ ಯುವತಿ ಹೇಳಿದ್ದಾಳೆ. ಆದರೆ ಯಾಸ್ಮಿನ್ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ. ಹಲ್ಲೆಗೊಳಗಾದ ಲಕ್ಷ್ಮೀ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅ.ಕೃ 34/2025,ಕಲಂ 352,115(2) BNS, 3(1)(r), 3(2)(va) SC/ST Act ರಂತೆ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ದಸ್ತಗಿರಿ ಮಾಡಲಾಗಿ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ . ಸದರಿ ಪ್ರಕರಣದ ಸಂತ್ರಸ್ತೆ ಮಹಿಳೆಯನ್ನು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ರವರು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ.
2 Comments