DAKSHINA KANNADA
ಅರುಣ ಕುಮಾರ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ – ಸಂತ್ರಸ್ತ ಮಹಿಳೆಯ ಮೆಡಿಕಲ್ ಟೆಸ್ಟ್

ಪುತ್ತೂರು ಸೆಪ್ಟೆಂಬರ್ 02: ಪುತ್ತಿಲ ಪರಿವಾರ ಸಂಸ್ಥಾಪಕ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು ಸಲ್ಲಿಸಿದ್ದ ಸಂತ್ರಸ್ಥೆಯ ಮೆಡಿಕಲ್ ಟೆಸ್ಟ್ ನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಿಳೆ ನೀಡಿದ ದೂರಿನ ಹಿನ್ನಲೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಮೆಡಿಕಲ್ ಟೆಸ್ಟ್ ಗೆ ಸರಕಾರಿ ಆಸ್ಪತ್ರೆಯಲ್ಲಿ ಮಾಡಿಸಿದ್ದಾರೆ.
