Connect with us

    DAKSHINA KANNADA

    ಪ್ರಧಾನಿ ಮೋದಿಯಿಂದ ಭಾನುವಾರ ಮೆಗಾ ರೋಡ್ ಶೋ, ಮಂಗಳೂರಿನಾದ್ಯಂತ ಸರ್ಪಗಾವಲು..!

    ಮಂಗಳೂರು :  ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14 ರ ಭಾನುವಾರ ಮಂಗಳೂರು ನಗರದಲ್ಲಿ ಮೆಗಾ ರೋಡ್‌ ಶೋ ನಡೆಸಲಿರುವ ಕಾರಣ  ಬಿಗಿ ಭದ್ರತೆ  ಏರ್ಪಡಿಸಲಾಗಿದೆ ಜೊತೆಗೆ ಅನೇಕ ಭಾಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

    ಮಧ್ಯಾಹ್ನ 2 ಗಂಟೆಯಿಂದ ರೋಡ್ ಶೋ  ಮುಗಿಯುವವರೆಗೂ ವಾಹನ ಸಂಚಾರ ನಿಷೇಧಿಸಿ ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್ ಆದೇಶ ಹೊರಡಿಸಿದ್ದಾರೆ.

    ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್, ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ ಹಂಪನಕಟ್ಟೆವರೆಗೆ ವಾಹನಗಳ ಸಂಚಾರ ನಿಷೇಧವಿರುತ್ತದೆ. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದೆ.

    ವಾಹನ ಸಂಚರಿಸುವ ಮಾರ್ಗಗಳು:

    ಉಡುಪಿ ಕಡೆಯಿಂದ ಮಂಗಳೂರಿಗೆ ಬರುವ ವಾಹನಗಳು ನಂತೂರು ಜಂಕ್ಷನ್, ಸೆಂಟ್ ಆಗ್ನೇಸ್, ಕಂಕನಾಡಿ ಮೂಲಕ ಸ್ಟೇಟ್‌ಬ್ಯಾಂಕ್ ನಿಂದ ಸಂಚರಿಸುವುದು. ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಸಂಚರಿಸುವುದು.

    ಪಂಪ್‌ವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಕಂಕನಾಡಿ ಜಂಕ್ಷನ್, ಮಿಲಾಗ್ರಿಸ್ ಜಂಕ್ಷನ್ ಮೂಲಕ ಸ್ಟೇಟ್‌ಬ್ಯಾಂಕ್ ಗೆ ಸಂಚಾರ. ಕಾರ್‌ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು,

    ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆಎಸ್‌ಆರ್‌ಟಿಸಿ ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು, ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

    ಎಲ್ಲೆಲ್ಲಾ ವಾಹನ ಸಂಚಾರ ನಿಷೇಧ ಜೊತೆಗೆ ಪಾರ್ಕಿಂಗ್ ನಿಷೇಧ?

    ಪ್ರಧಾನಿ ಮೋದಿ ಸಂಚರಿಸುವ ಜಾಗಗಳಲ್ಲಿ ವಾಹನ ಸಂಚಾರ ನಿಷೇಧ ಜೊತೆಗೆ ಪಾರ್ಕಿಂಗ್ ಮಾಡುವುದನ್ನೂ ನಿಷೇಧಿಸಲಾಗಿದೆ. ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು – ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ – ಕೆ.ಪಿ.ಟಿ – ಕೊಟ್ಟಾರ ಚೌಕಿ, ಉರ್ವ ಸ್ಟೋರ್ – ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆವರೆಗೆ ವಾಹನ ಪಾರ್ಕಿಂಗ್ ನಿಷೇಧವಿರುತ್ತದೆ.
    ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್, ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ ಹಂಪನಕಟ್ಟೆವರೆಗೆ ವಾಹನಗಳ ಸಂಚಾರ ನಿಷೇಧವಿರುತ್ತದೆ. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದೆ.
    ಕೆಎಸ್‌ಆರ್‌ಟಿಸಿಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಮಾರ್ಗ, ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಮಾರ್ಗ, ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
    ಕೆಎಸ್‌ಆರ್ಟಿಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಸಾಗುವ ಮಾರ್ಗದಲ್ಲಿ ನಿಷೇಧ. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಸಾಗುವ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ.
    ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಹೋಗುವ ಮಾರ್ಗಗಳು ನಿಷೇಧ. ಜೊತೆಗೆ ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರ ನಿಷೇಧಿಸಲಾಗಿದೆ.
    ಮೋದಿ ರೋಡ್ ರೋಡ್ ಶೋಗೆ ಬರುವ ವಾಹನಗಳಿಗೆ ಪಾರ್ಕಿಂಗ್ ಸ್ಥಳಗಳು.
    ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್, ಎಮ್ಮೆಕರೆ ಮೈದಾನ, ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ, ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್ ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು, ಸುಲ್ತಾನ್ ಬತ್ತೇರಿ ಗ್ರೌಂಡ್ಸ್,ಮಿಲಾಗ್ರಿಸ್ ಕಾಲೇಜು ಮೈದಾನ, ಬಲ್ಮಠ ಶಾಂತಿ ನಿಲಯ ಮೈದಾನ, ಸೆಂಟ್ ಸೆಬಾಸ್ಟಿನ್ ಹಾಲ್ ಪಾಕಿಂಗ್ (ಸೆಂಟ್ ಅಗ್ನೇಸ್ ಶಾಲೆ).
    ಟಿ.ಎಂ.ಎ ಪೈ ಹಾಲ್ ಮೈದಾನ, ಬಿ.ಇ.ಎಂ ಶಾಲಾ ಮೈದಾನ, ನೆಹರೂ ಮೈದಾನ , ಗಣಪತಿ ಶಾಲಾ ಮೈದಾನ , ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್ , ಸಿ.ವಿ ನಾಯಕ್ ಹಾಲ್ ಮೈದಾನ,ಪುರಭವನ ಪಾರ್ಕಿಂಗ್ ಸ್ಥಳ, ಕದ್ರಿ ಮೈದಾನ, ಕೆಪಿಟಿ ಕಾಲೇಜು ಮೈದಾನ, ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ, ಪದುವಾ ಕಾಲೇಜು ಮೈದಾನ
    ಲೇಡಿಹಿಲ್ ಶಾಲಾ ಮೈದಾನ, ಲೇಡಿಹಿಲ್ ಚರ್ಚ್ ಮೈದಾನ,ಕರಾವಳಿ ಮೈದಾನ , ಉರ್ವ ಮಾರ್ಕೆಟ್ ಮೈದಾನ ,ಉರ್ವ ಸ್ಟೋರ್ ಮೈದಾನ, ಉರ್ವ ಕೆನರಾ ಶಾಲಾ ಮೈದಾನ, ಕೆನರಾ ಕಾಲೇಜು ಮೈದಾನ, ಡೊಂಗರಕೇರಿ ಕೆನರಾ ಶಾಲಾ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply