KARNATAKA
ತಕ್ಷಣ ಜಾರಿಗೆ ಬರುವಂತೆ ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು: ಹೈಕೋರ್ಟ್ ತರಾಟೆ ಬೆನ್ನಲ್ಲೆ ಇದೀಗ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದ್ದು, ತಕ್ಷಣ ಜಾರಿಗೆ ಬರುವಂತೆ ಮೇಕೆದಾಟು ಪಾದಯಾತ್ರೆಯನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಮೇಕೆದಾಟು, ನಮ್ಮ ನೀರು ನಮ್ಮ ಹಕ್ಕು ಸೇರಿದಂತೆ ಈ ಉದ್ದೇಶದ ಯಾವುದೇ ಯಾತ್ರೆಗೆ ವ್ಯಕ್ತಿ ಅಥವಾ ವಾಹನಗಳು ಹೋಗುವುದನ್ನು ತಕ್ಷಣದಿಂದಲೇ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಮನಗರದ ಒಳಗೆ ಹಾಗೂ ಅಂತರ ಜಿಲ್ಲೆಗೆ ಈ ಉದ್ದೇಶದಿಂದ ಓಡಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ, ಡಿಸಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೂಚನೆ ನೀಡಿದ್ದಾರೆ