KARNATAKA
ಮೇಕೆದಾಟು ಪಾದಯಾತ್ರೆ ತಾತ್ಕಾಲಿಕವಾಗಿ ರದ್ದು…!!
ರಾಮನಗರ ಜನವರಿ 13: ಹೈಕೋರ್ಟ್ ತರಾಟೆ ಬಳಿಕ ಕಾಂಗ್ರೇಸ್ ನಾಯಕರು ತಮ್ಮ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ.
ಈ ಕುರಿತಂತೆ ಇಂದು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಸದ್ಯ ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕೊರೊನಾ ಪ್ರಕರಣಗಳು ಕಡಿಮೆಯಾದ ಬಳಿಕ ಮತ್ತೆ ರಾಮನಗರದಿಂದಲೇ ಪಾದಯಾತ್ರೆಯನ್ನು ಪ್ರಾರಂಭಿಸುತ್ತೆವೆ ಎಂದು ತಿಳಿಸಿದರು. ನಾವು ಎರಡು ತಿಂಗಳ ಹಿಂದೆ ಪಾದಯಾತ್ರೆ ಘೋಷಿಸಿದಾಗ ಕೊರೊನಾ ಹಾವಳಿ ಇರಲಿಲ್ಲ. ಹೀಗಾಗಿ ಪಾದಯಾತ್ರೆ ಆರಂಭಿಸಿದೆವು. ಈಗ ಕೋವಿಡ್ ಸೋಂಕುಹೆಚ್ಚಾದ ಕಾರಣ ಇಲ್ಲಿಗೆ ನಿಲ್ಲಿಸುತ್ತಿದ್ದೇವೆ. ಮುಂದೆ ಇದೇ ನೆಲದಿಂದ ಮತ್ತೆ ಪಾದಯಾತ್ರೆ ಆರಂಭ ಆಗಲಿದೆ ಎಂದರು.
ಇದಕ್ಕೂ ಮೊದಲು ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಿದೆ. 12 ದಿನಗಳ ಪಾದಯಾತ್ರಯನ್ನು 5 ದಿನಕ್ಕೆ ಮೊಟಕುಗೊಳಿಸಿದ್ದು, ಕೊರೊನಾ ಸೋಂಕು ಕಡಿಮೆಯಾದ ನಂತರ ರಾಮನಗರದಿಂದಲೇ ಮತ್ತೇ ಪಾದಯಾತ್ರೆಯನ್ನು ಪ್ರಾರಂಭಿಸಲು ಕಾಂಗ್ರಸ್ ನಾಯಕರು ನಿರ್ಧರಿಸಿದೆ.