DAKSHINA KANNADA
ಜಗದೀಶ್ ಕಾರಂತ್ ಮೇಲೆ ಕಠಿಣ ಕ್ರಮಕ್ಕೆ ಮುಸ್ಲೀಂ ಒಕ್ಕೂಟ ಆಗ್ರಹ
ಜಗದೀಶ್ ಕಾರಂತ್ ಮೇಲೆ ಕಠಿಣ ಕ್ರಮಕ್ಕೆ ಮುಸ್ಲೀಂ ಒಕ್ಕೂಟ ಆಗ್ರಹ
ಮಂಗಳೂರು, ಸೆಪ್ಟೆಂಬರ್ 20 : ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಜಗದೀಶ್ ಕಾರಂತ್ ವಿರುದ್ದ ಮುಸ್ಲೀಂ ನಾಯಕರುಗಳು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ ಪೋಲಿಸ್ ಇಲಾಖೆ ಮತ್ತು ಸಿಬಂದಿಗಳು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಹಿಂದು ಪರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಅವರು ಕೋಮು ಪ್ರಚೋದಿಸಿ ಭಾಷಣ ಮಾಡಿದ್ದಾರೆ ಎಂದು ಮುಸ್ಲೀಂ ನಾಯಕರುಗಳು ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮುಸ್ಲೀಂ ಸಂಘಟನೆಗಳ ಒಕ್ಕೂಟ ಈ ದೂರನ್ನು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ನೀಡಿದ್ದಾರೆ. ಸಾರ್ವಜನಿಕವಾಗಿ ಒಂದೇ ಸಮುದಾಯವನ್ನು ಗುರಿಯಾಗಿರಿಸಿ ಉದ್ರೇಕಕಾರಿ ಭಾಷಣ ಮಾಡುವ ಮೂಲಕ ಜನರನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಕೋಮು ಭಾವನೆ ಕೆರಳಿಸಿ ಜಿಲ್ಲೆಯ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸವನ್ನು ಜಗದೀಶ್ ಕಾರಂತ್ ಅವರು ಮಾಡುತ್ತಿದ್ದು ಇವರ ಮೇಲೆ ಸೂಕ್ತ ಕ್ರಮವನ್ನು ಪೋಲಿಸ್ ಇಲಾಖೆ ಜರುಗಿಸಬೇಕೆಂದು ಒಕ್ಕೂಟ ಆಗ್ರಹಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಮುಸ್ಲೀಂ ಸಂಘಟನೆಗಳ ಒಕ್ಕೂಟ ದ ಅಧ್ಯಕ್ಷ ಕೆ, ಅಶ್ರಫ್ ಅವರ ನೇತ್ರತ್ವ ನೀಯೋಗ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಭೇಟಿ ಮಾಡಿ ಜಗದೀಶ್ ಕಾರಂತ್ ಅವರ ಮೇಲೆ ಕ್ರಮಕ್ಕೆ ಮನವಿ ಆರ್ಪಿಸಿತು.
You must be logged in to post a comment Login