Connect with us

    LATEST NEWS

    ಪುಲ್ವಾಮದಲ್ಲಿ ಉಗ್ರರ ದಾಳಿ: ಪೊಲೀಸ್‌ ಸಿಬ್ಬಂದಿ ಹುತಾತ್ಮ

    ಶ್ರೀನಗರ, ಅಕ್ಟೋಬರ್ 04: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

    ಪೊಲೀಸರು ಮತ್ತು ಸಿಆರ್‌ಪಿಎಫ್‌ ಯೋಧರು ಜಂಟಿಯಾಗಿ ಗಸ್ತು ಕಾರ್ಯ ನಡೆಸುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಸಿಆರ್‌ಪಿಎಫ್‌ ಯೋಧರೊಬ್ಬರು ಗಾಯಗೊಂಡಿದ್ದಾರೆ. ದಾಳಿ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದಿದ್ದಾರೆ.

    ಶೋಪಿಯಾನ್‌ ಜಿಲ್ಲೆಯ ಬಾಸ್ಕುಚಾನ್‌ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಲಷ್ಕರ್‌ ಎ ತಯಬಾ (ಎಲ್‌ಇಟಿ) ಉಗ್ರನನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ಉಗ್ರನನ್ನು ನೌಪೋರಾ ಪ್ರದೇಶದ ನಾಸಿರ್‌ ಅಹಮ್ಮದ್‌ ಭಟ್‌ ಎಂದು ಗುರುತಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದಾಗ ಉಗ್ರ ಹತನಾಗಿದ್ದಾನೆ ಎಂದೂ ವಿವರಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *