Connect with us

    DAKSHINA KANNADA

    ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ; ಉದ್ದೇಶಪೂರ್ವಕ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

    ಮಂಗಳೂರು, ನವೆಂಬರ್ 20: ನಾಗುರಿಯಲ್ಲಿ ನಡೆದ ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರೋದು ದೃಢವಾಗಿದೆ. ಇದು ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

    “ಉದ್ದೇಶಪೂರ್ವಕವಾಗಿ ಸಾವು- ನೋವು ಹಾನಿ ಉಂಟು ಮಾಡಲು ಈ ಸಂಚು ಮಾಡಲಾಗಿತ್ತು. ಕರ್ನಾಟಕ ಪೊಲೀಸರಿಂದ ಸೂಕ್ಷ್ಮವಾಗಿ, ಆಳವಾಗಿ ತನಿಖೆ ನಡೆಸಲಾಗ್ತಿದೆ‌. ಕೇಂದ್ರದ ತನಿಖಾ ಸಂಸ್ಥೆಗಳ ಜೊತೆ ತನಿಖೆ ನಡೆಸಲಾಗ್ತಿದೆ” ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

    ಪ್ರವೀಣ್ ಸೂದ್​ ಅವರ ಟ್ವೀಟ್​​ನ್ನು ಎಡಿಜಿಪಿ ಅಲೋಕ್ ಕುಮಾರ್ ರೀಟ್ವೀಟ್ ಮಾಡಿದ್ದಾರೆ. ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣ ಭೇದಿಸಲು ಪೊಲೀಸ್ ಕಮಿಷನರ್ ಮೂರು ತಂಡಗಳ ರಚನೆ ಮಾಡಿದ್ದಾರೆ. ಕಳೆದ ರಾತ್ರಿಯೇ ರಾಜ್ಯದ ವಿವಿಧ ಭಾಗಗಳಿಗೆ ಪೊಲೀಸರ ತಂಡ ತೆರಳಿದೆ. ಸ್ಫೋಟದ ಜಾಡು ಹಿಡಿದು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪ್ರಸ್ತುತ ಸ್ಪೋಟದಲ್ಲಿ ಗಾಯಗೊಂಡವರು ನಗರದ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಿಗಿ ಭದ್ರತೆ ಒದಗಿಸಲಾಗಿದೆ. ಇಂದು ಅಪರಾಹ್ನ ವೇಳೆಗೆ ಎನ್‌ ಐಎ  ತಂಡ, ಎಡಿಜಿಪಿ ಮಂಗಳೂರು ಆಗಮಿಸಲಿದ್ದು ಸ್ಫೋಟದ ಬಗ್ಗೆ ಆಳವಾದ ತನಿಖೆ ಕೈಗೊಳ್ಳಲಿದ್ದಾರೆ.

    ಈ ಸ್ಫೋಟಕ ಎಲ್ಲಿ ತಯಾರಾಗಿತ್ತು ಮತ್ತು ಅದನ್ನು ಎಲ್ಲಿ ಸಾಗಿಸಲಾಗುತ್ತಿತ್ತು ಎಂಬುದನ್ನು ಪೊಲೀಸ್ ಅಧಿಕಾರಿಗಳು ಇನ್ನು ಬಹಿರಂಗ ಪಡಿಸಿಲ್ಲ. ಶನಿವಾರ ರಾಜ್ಯದ ಮುಖ್ಯಮಂತ್ರಿಗಳ ಮಂಗಳೂರು ನಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಪರಾಹ್ನ ಬಳಿಕ ಬೆಂಗಳೂರಿಗೆ ಹಿಂದಿರುಗಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಈ ಘಟನೆ ಸಂಭವಿಸಿದ್ದು ಆತಂಕ ಸೃಷ್ಟಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply