ವಳಚ್ಚಿಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿಬಸ್ ಪಲ್ಟಿ – ಹಲವರಿ ಗಾಯ

ಮಂಗಳೂರು ಜೂನ್ 6: ಮಂಗಳೂರು ನಗರದ ಹೊರವಲಯದ ವಳಚ್ಚಿಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಮಿನಿ ಬಸ್ ಅಪಘಾತವಾಗಿ ಹಲವಾರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಳಚ್ಚಿಲ್ ಮಸೀದಿ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಮಿನಿ ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ಹಲವರು ಜನ ಗಂಭೀರ ಗಾಯಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವಿನ 25 ಜನರಿದ್ದ ಕ್ರಿಶ್ಚಿಯನ್ ಕುಟುಂಬವೊಂದು ಕೇರಳ ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಸಂದರ್ಭ ವಳಚ್ಚಿಲ್ ತಲುಪುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಘಟನೆಯಲ್ಲಿ ಬಸ್ ಡ್ರೈವರ್ ಹಾಗೂ ಕೆಲವು ಪ್ರಯಾಣಿಕರ ಕೈ- ಕಾಲಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಸ್ಥಳೀಯರ ನೆರವಿನೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯ ಸಂದರ್ಭ ಬಸ್ಸಿನಲ್ಲಿದ್ದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ ಪಾರಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

VIDEO

Facebook Comments

comments