Connect with us

BELTHANGADI

ಚಾರ್ಮಾಡಿಯಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿ: ಮೂವರಿಗೆ ಗಾಯ

ಬೆಳ್ತಂಗಡಿ, ಜೂನ್ 16: ಕೆಲಸಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Click to comment

You must be logged in to post a comment Login

Leave a Reply