ಬಂಟ್ವಾಳ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮಿನಿ ಲಾರಿ ಚಾಲಕ ಕ್ಲೀನರ್ ಗಂಭಿರ

ಬಂಟ್ವಾಳ ಎಪ್ರಿಲ್ 29: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಮಿನಿ ಲಾರಿಯೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳದ ಮಾರ್ನಬೈಲು ಎಂಬಲ್ಲಿ ಈ ಘಟನೆ ನಡೆದಿದ್ದು, ಕೊಳಿ ಆಹಾರ ಪೂರೈಕೆ ಮಾಡುವ ಮಿನಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಿನಿ ಲಾರಿಗೆ ಬೆಂಕಿ ಹತ್ತಿಕೊಂಡು ಭಾಗಶ ಭಸ್ಮವಾಗಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ.