LATEST NEWS
ನಾನು ರಿಸೈನ್ ಮಾಡ್ತೇನೆ ಎಂದ ಚೀಫ್ ಎಂಜಿನಿಯರ್..ಗೆಟ್ ಔಟ್ ಎಂದ್ರು ಸಚಿವ ಭೈರತಿ ಸುರೇಶ್

ಮಂಗಳೂರು ನವೆಂಬರ್ 24: ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸದೇ ಕಾಮಗಾರಿ ಬಗ್ಗೆ ಸಕಾಲದಲ್ಲಿ ಸರಾಕರದ ಗಮನಕ್ಕೆ ತರದ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದ ಚೀಫ್ ಎಂಜಿನಿಯರ್ ವಿರುದ್ದ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಗರಂ ಆದ ಘಟನೆ ಇಂದು ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಚೀಫ್ ಎಂಜಿನಿಯರ್‌ಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ‘ಗೆಟ್ ಔಟ್’ ಎಂದು ಸಭೆಯಿಂದ ಹೊರಹಾಕಿದ ಘಟನೆ ನಡೆದಿದೆ.

ಕೆಯುಐಡಿಎಫ್‌ಸಿ ಕಾಮಗಾರಿಗಳು ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ. ಶೇ.60ರಷ್ಟು ಕಾಮಗಾರಿ ನಡೆಸಲು 4 ವರ್ಷ ಹಿಡಿದಿದೆ. ಇನ್ನುಳಿದ ಶೇ.40ರಷ್ಟು ಕಾಮಗಾರಿ ಇನ್ನು ನಾಲ್ಕೈದು ತಿಂಗಳಲ್ಲಿ ಸಂಪೂರ್ಣಗೊಳಿಸಲು ಆಗುತ್ತಾ? ಎಂದು ಚೀಫ್ ಎಂಜಿನಿಯರ್ ಜಯರಾಮ್ ಅವರನ್ನು ಸಚಿವರು ಪ್ರಶ್ನಿಸಿದರಲ್ಲದೆ, ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಜಯರಾಮ್ ‘ಹಾಗಾದರೆ ನಾನು ರಿಸೈನ್ ಮಾಡ್ತೇನೆ’ ಎಂದರು. ಇದರಿಂದ ತೀವ್ರ ಕೆರಳಿದ ಸಚಿವ ಬೈರತಿ ಸುರೇಶ್, ಗೆಟ್ ಔಟ್ ಫ್ರಂ ಹಿಯರ್ ಎಂದು ಆಜ್ಞೆ ಮಾಡಿದರು. ಕೊನೆಗೆ ಅಧಿಕಾರಿ ಸಭೆಯಿಂದ ಹೊರನಡೆದರು. ಜಯರಾಮ್ ಅವರು ಕೆಯುಐಡಿಎಫ್‌ಸಿ ಚೀಫ್ ಎಂಜಿನಿಯರ್ ಆಗಿ ನಿವೃತ್ತರಾದ ಬಳಿಕ ಗುತ್ತಿಗೆ ಆಧಾರದಲ್ಲಿ ಮುಂದುವರಿದಿದ್ದರು.