KARNATAKA
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಪತ್ನಿ ಹಾಗೂ ಮಗಳಿಗೂ ಕೊರೊನಾ…!!
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ.
ಸುಧಾಕರ್ ಅವರ ಮನೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ನಿನ್ನೆ ಬೆಳಗ್ಗೆ ಸುಧಾಕರ್ ಅವರ 82 ವರ್ಷ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇನ್ನು ಮನೆಯವರೆಲ್ಲರ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು ಪತ್ನಿ ಮತ್ತು ಮಗಳಿಗೆ ಸೋಂಕು ದೃಢಪಟ್ಟಿದ್ದು, ನಾನು ಮತ್ತು ನನ್ನ ಇಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
You must be logged in to post a comment Login