LATEST NEWS
ಕೊರಗರ ಮೇಲೆ ಪೊಲೀಸ್ ಹಲ್ಲೆ – ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಕೋಟ ಡಿಸೆಂಬರ್ 29: ಕೋಟತಟ್ಟು ಗ್ರಾಮದಲ್ಲಿ ಕೊರಗ ಕುಟುಂಬದ ಮೇಲೆ ಪೊಲೀಸರು ನಡೆಸಿರುವ ಹಲ್ಲೆಯನ್ನು ಖಂಡಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗರ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. ಮದುವೆ ಸಮಾರಂಭಕ್ಕೆ ನುಗ್ಗಿದ್ದ ಪೊಲೀಸರು ಮದುಮಗನ ಸಹಿತ ಕೊರಗ ಕುಟುಂಬದ ಮೇಲೆ ಹಲ್ಲೆ ಮಾಡಿದ್ದರು. ಘಟನೆ ಕುರಿತು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಹಾಗೂ ಪಶ್ಚಿಮ ವಲಯ ಐಜಿಪಿಯಂದಿಗೆ ಸಚಿವರು ಚರ್ಚಿಸಿದರು. ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಜರುಗಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.
