KARNATAKA
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ – ಬೆನ್ನು ಮೂಳೆಗೆ ಪೆಟ್ಟು
ಬೆಳಗಾವಿ ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ.
ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆನ್ನು ಮೂಳೆ ಹಾಗೂ ಕತ್ತಿಗೆ ಪೆಟ್ಟು ಬಿದ್ದಿದ್ದು, ಕೆಲವು ದಿನಗಳ ಕಾಲ ವಿಶ್ರಾಂತ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟಕ್ಕೆ ಕಾರಿನೊಳಗಿದ್ದವರಿಗೆ ಯಾವ ಪ್ರಾಣಾಪಾಯವಾಗಿಲ್ಲ..