KARNATAKA
ತಮ್ಮ ವಿರುದ್ದ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ 6 ಜನ ಸಚಿವರು
ಬೆಂಗಳೂರು ಮಾರ್ಚ್ 65: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ , ರಾಜ್ಯ ಬಿಜೆಪಿ ಸರಕಾರದಲ್ಲಿ ಕೆಲವು ಸಚಿವರಿಗೆ ನಡುಕ ಪ್ರಾರಂಭವಾಗಿದ್ದು, ತಮ್ಮ ವಿರುದ್ದ ಯಾವುದೇ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ 6 ಮಂದಿ ಸಚಿವರು ಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ. ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಬೆಂಗಳೂರಿನ ಸಿವಿಲ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ನಾಳೆ ಆದೇಶ ನೀಡುವ ಸಾಧ್ಯತೆಯಿದೆ. ಕೋರ್ಟ್ ಮೊರೆ ಹೋಗಿರುವ ಆರು ಸಚಿವರ ನಡೆ ತೀವ್ರ ಕುತೂಹಲ ಕೆರಳಿಸಿದೆ. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಆರು ಸಚಿವರಿಗೆ ಭೀತಿ ಹುಟ್ಟಿರುವುದು ಏಕೆ? ಇದ್ದಕ್ಕಿಂದ್ದಂತೆ ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.