Connect with us

BELTHANGADI

ಸಚಿವ ರೈ ನಾಝೀ ಸಿದ್ದಾಂತದ ಪ್ರತಿಪಾದಕ :ಹರೀಶ್ ಪೂಂಜಾ

ಮಂಗಳೂರು, ಸೆಪ್ಟೆಂಬರ್ 02 : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನಾಝೀ ಸಿದ್ದಾಂತದ ಪ್ರತಿಪಾದಕ, ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಲ್ಲಿ ಜಿಲ್ಲೆಯಲ್ಲಿ ನಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು . ಈ ಹತ್ಯೆಗಳಿಗೆ ಸಚಿವ ರಮಾನಾಥ್ ರೈ ಪ್ರೇರಣೆ ನೀಡಿದ್ದಾರೆ ಎಂದಾದರೆ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಲಿದೆ ಎಂದವರು ಹೇಳಿದರು .

ಸೆಪ್ಟೆಂಬರ್ 12 ರಂದು ಸಚಿವ ರಮಾನಾಥ್ ರೈ ಅವರ ನೇತೃತ್ವದಲ್ಲಿ ನಡೆಯಲಿರುವ ಸೌಹಾರ್ದ ನಡಿಗೆ ಢೋಂಗಿ ಜಾತ್ಯತೀತ ನಡಿಗೆ ಎಂದು ಅವರು ಕಿಡಿಕಾರಿದರು .

ಸೆಪ್ಟೆಂಬರ್ 7 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಲಾಗಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ ರಾಲಿಗೆ ಮೈಸೂರು, ಬೆಂಗಳೂರು, ಚಿಕ್ಕಮಂಗಳೂರು, ಶಿವಮೊಗ್ಗ ಹಾಗೂ ಹುಬ್ಬಳ್ಳಿಯಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು .

ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಭಾಗವಹಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಪಿಎಫ್ಐ ಎಸ್ ಡಿ ಪಿ ಐ ಹಾಗೂ ಕೆಎಫ್ ಡಿ ಯನ್ನು ರಾಜ್ಯ ನಿಷೇಧಿಸಬೇಕು. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಮತ್ತು ಹಲ್ಲೆ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಬೇಕು, ಸೇರಿದಂತೆ ಕೋಮು ಹಿಂಸೆಗೆ ಕುಮ್ಮಕ್ಕು ನೀಡುತ್ತಿರುವ ಸಚಿವ ರಮಾನಾಥ್ ರೈ ಅವರನ್ನು ಸಂಪುಟದಿಂದ ಈ ಕೂಡಲೇ ವಜಾಗೊಳಿಸುವಂತೆ ಪ್ರತಿಭಟನಾ ಸಭೆ ಮೂಲಕ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು .