Connect with us

    DAKSHINA KANNADA

    ಸಮಸ್ಯೆಗಳ ವರದಿ ಮಾಡಿದ ಮಾಧ್ಯಮಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಎಸ್.ಅಂಗಾರ

    ಸುಬ್ರಹ್ಮಣ್ಯ, ಜುಲೈ 15: ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ.

    ಕೆಲವೊಮ್ಮೆ ಆದ ಕೆಲಸವನ್ನು ಬರೆಯದೆ ಬಿಟ್ಟು ಬಿಡುತ್ತಾರೆ. ಅದೇ ಮಾದ್ಯಮದವರು ಮತ್ತು ಇತರರು ವಾಟ್ಸಪ್‌ನಲ್ಲಿ ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆ. ಆದ ಕೆಲಸಗಳ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಮಾಧ್ಯಮಗಳ ಮೇಲೆಯೇ ಹರಿಹಾಯ್ದಿದ್ದಾರೆ.

    ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾರೀ ಮಳೆಗೆ ಸಂಭವಿಸಿರುವ ಮಳೆ ಹಾನಿ ಪ್ರದೇಶಗಳಿಗೆ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಲ್ಲಿ ಶೀಘ್ರ ಸೇತುವೆ ನಿರ್ಮಾಣ ಮಾಡುವ ಭರವಸೆ ನೀಡಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *