Connect with us

    LATEST NEWS

    ಉಡುಪಿ: ಮಹಿಳೆಯರೊಂದಿಗೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತ ಸಚಿವೆ ಶೋಭಾ ಕರಂದ್ಲಾಜೆ

    ಉಡುಪಿ ಅಗಸ್ಟ್ 19: ಜನಾಶೀರ್ವಾದ ಯಾತ್ರೆ ಪ್ರಯುಕ್ತ ಉಡುಪಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಕಡೇಕಾರು ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಕಳೆ ಕೀಳುವ ಮೂಲಕ ರೈತ ಮಹಿಳೆಯರಿಗೆ ಸಾಥ್ ನೀಡಿದರು.


    ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿರುವ ಸಚಿವೆ ಶೋಭಾ ಕರಂದ್ಲಾಜೆ ಬೆಳಿಗ್ಗೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಅವರಿಂದ ಫಲ ಮಂತ್ರಾಕ್ಷತೆ ಪಡೆದರು.
    ನಂತರ ಶಾಸಕ ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಕೇದಾರೋತ್ಥಾನ ಟ್ರಸ್ಟ್‌ನಿಂದ ಉಡುಪಿ ತಾಲ್ಲೂಕಿನಾದ್ಯಂತ ಹಡಿಲುಭೂಮಿ ಕೃಷಿ ಆಂದೋಲನದ ಅಂಗವಾಗಿ ಭತ್ತದ ಗದ್ದೆಯ ಕಳೆ ಕಿಳುವ ಕೆಲಸದಲ್ಲಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಗದ್ದೆಗೆ ಇಳಿದು ಕಳೆ ಕಿತ್ತರು.

    ವಿಶ್ವಸಂಸ್ಥೆಯಲ್ಲಿ ಭಾರತವು ರಾಗಿಗಳನ್ನು ಅಂತಾರಾಷ್ಟ್ರೀಯವಾಗಿ ಪರಿಗಣಿಸಲು ನಿರ್ಣಯವನ್ನು ಅಂಗೀಕರಿಸಬೇಕೆಂದು ಪ್ರಸ್ತಾಪಿಸಿದ ನಂತರ, ಎಲ್ಲಾ ಸದಸ್ಯ ರಾಷ್ಟ್ರಗಳು ಈ ಪರವಾಗಿ ಮತ ಚಲಾಯಿಸಿವೆ ಅಲ್ಲದೆ 2023 ಅನ್ನು ‘ಅಂತರರಾಷ್ಟ್ರೀಯ ರಾಗಿ ವರ್ಷ’ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply