Connect with us

LATEST NEWS

ಬಳ್ಳಾರಿ ಜಿಲ್ಲೆ ವಿಭಜನೆ ಕುರಿತು ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

ಬಳ್ಳಾರಿ ಜಿಲ್ಲೆ ವಿಭಜನೆ ಕುರಿತು ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

ಉಡುಪಿ ಸೆಪ್ಟೆಂಬರ್ 28: ಬಳ್ಳಾರಿ ಜಿಲ್ಲೆ ವಿಭಜನೆ ಕುರಿತ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು ಬಳ್ಳಾರಿ ಜನರ ಭಾವನೆ ಬೇರೆ ಬೇರೆ ರೀತಿ ಇದ್ದು ರಾಜ್ಯ ಸರಕಾರದ ತೀರ್ಮಾನಗಳಿಗೆ ಕೆಲವೊಮ್ಮೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ, ವಿಜಯಪುರವನ್ನು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು,ಶಾಸಕ ಸೋಮಶೇಖರ್ ರೆಡ್ಡಿ ನನ್ನ ಸಹೋದರ. ಅವರು ನನ್ನ ಜೊತೆಗಿರುವ ಶಾಸಕ. ಅವರ ಜೊತೆ ಕುಳಿತು ಮಾತನಾಡಿ ಅಭಿಪ್ರಾಯ ಪಡೆದು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

ಈ ಕುರಿತಂತೆ ಸಿಎಂ ಜೊತೆ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇನೆ. ಆ ಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರುತ್ತೇವೆ. ಆ ಭಾಗ ಅಭಿವೃದ್ಧಿ ಅಗಬೇಕು ಅನ್ನೋದು ನನ್ನ ಅಭಿಪ್ರಾಯ. ದೊಡ್ಡ ಜಿಲ್ಲೆಯಾದ ಕಾರಣ ಬೇರೆ ಬೇರೆ ತೊಂದರೆ ಬರಬಾರದು ಎಂಬೂದು ನಮ್ಮ ದೃಷ್ಟಿಕೋನ ಎಂದರು.

VIDEO