Connect with us

    DAKSHINA KANNADA

    ಕಡಬದಲ್ಲಿ ವಿಧ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಹೀನ ಕೃತ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಬೆಂಗಳೂರು ಮಾರ್ಚ್ 4: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಘಟನೆಯಾಗಿದ್ದು, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
    ಕಡಬ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಈ ಘಟನೆ ಕುರಿತು ಈಗಾಗಲೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಇದೊಂದು ಹೀನಕೃತ್ಯ, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ.


    ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ಆಗಬೇಕು; ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply