Connect with us

    BANTWAL

    ಇನ್ಸ್ಟಾಗ್ರಾಮ ನಲ್ಲಿ ಅಪ್ರಾಪ್ತೆ ಜೊತೆ ಸ್ನೇಹ ಬೆಳೆಸಿ ಅತ್ಯಾಚಾರ : ಮಗು ಕರುಣಿಸಿ ಆರೋಪಿ ವಿದೇಶಕ್ಕೆ ಪರಾರಿ

    ಬಂಟ್ವಾಳ ಸೆಪ್ಟೆಂಬರ್ 7: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್​ನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ಹಾರಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಆರೋಪಿ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


    ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಬಿ.ಸಿ. ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾಗಿದ್ದ. ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಕುರಿತು ಮಾಹಿತಿ ಲಭ್ಯವಾಗಿದ್ದು, ಮಸೂದ್​​​ ಪತ್ತೆಗೆ ಬಂಟ್ವಾಳ ಪೊಲೀಸ್ ಇನ್ಸ್​ಪೆಕ್ಟರ್ ಟಿ.ಡಿ. ನಾಗರಾಜ್ ನೇತೃತ್ವದ ತಂಡ ಶೋಧ ಕಾರ್ಯ ನಡೆಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply