LATEST NEWS
ಓಡಿಶಾ – 5 ವರ್ಷದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ

ಓಡಿಶಾ : 5 ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರ ಮಾಡಿರುವ ಘಟನೆ ಓಡಿಶಾದ ಪುರಿ ಪಟ್ಟಣದಲ್ಲಿ ನಡೆದಿದ್ದು, ಇದೀಗ ಬಾಲಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ.
ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಕೆಯ ಸ್ಥಿತಿ ಚಿಂತಜನಕವಾದ್ದರಿಂದ ಕಟಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆರೋಪಿಯನ್ನು ಬಂಧಿಸಲು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆರೋಪಿ ಜಗತ್‍ಸಿಂಗ್‍ಪುರ ಜಿಲ್ಲೆಯವನು ಎಂದು ತಿಳಿದುಬಂದಿದೆ. ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.