Connect with us

    DAKSHINA KANNADA

    ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ, ಸರ್ಕಾರಿ ಬಸ್ ನಿರ್ವಾಹಕ ಕಡಬ ಪೊಲೀಸ್ ವಶಕ್ಕೆ..!

    ಕಡಬ: ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಸರ್ಕಾರಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಶನಿವಾರ ನಡೆದಿದೆ.

    ಜಿಲ್ಲೆಯ ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಸರ್ಕಾರಿ ಬಸ್ ಏರಿದ್ದರು. ಆಲಂಕಾರಿಗೆ ಎಂದು ಯುವತಿ ಹೇಳಿದರೂ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಕಡಬದತ್ತ ಬಸ್ ಹೊರಟಿತ್ತು ಎನ್ನಲಾಗಿದೆ. ತಾನು ಇಳಿಯುವ ಸ್ಥಳ ಬಂದಾಗ ಮೈ‌ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ನಿರ್ವಾಹಕ ಸೂಚಿಸಿದ್ದ ಎಂದು‌ ಆರೋಪಿಸಲಾಗಿದೆ. ಬಸ್ ನಿಲ್ಲಿಸದೆ ಅನುಚಿತ ವರ್ತನೆ ತೋರಿದ ಬಗ್ಗೆ ಯುವತಿ ಪರಿಚಿತರಿಗೆ ಮಾಹಿತಿ ನೀಡಿದ ಹಿನ್ನೆಲೆ ಕಡಬ ಸಮೀಪದ ಕಳಾರ ಮಸೀದಿ ಬಳಿ ಬಸ್ ನ್ನು ಭೀಮ್ ಆರ್ಮಿ ಸಂಘಟನೆಯ ಸದಸ್ಯರು ತಡೆದು ನಿಲ್ಲಿಸಿ ಬಳಿಕ ಠಾಣೆ ಗೆ ಕರೆದೊಯ್ದಿದ್ದಾರೆ. ಒತ್ತಾಯ ಪೂರ್ವಕವಾಗಿ ಕಡಬದತ್ತ ಕರೆದುಕೊಂಡು ಬಂದಿರುವುದಾಗಿ ಯುವತಿ‌ ಕವಿತಾ ಎಂಬವರು KA 21F3276 ಬಸ್ಸಿನ ನಿರ್ವಾಹಕನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಠಾಣೆಗೆ ಯುವತಿ ದೂರು ನೀಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತೆರಳಲು ಪೊಲೀಸರು ಪರ್ಯಾಯವಾಗಿ ಬೇರೆ ಬಸ್ಸಿನ ವ್ಯವಸ್ಥೆ ಕಲ್ಪಿಸಿ ನಿರ್ವಾಹಕನ್ನು ಬಸ್ ಸಮೇತ ಠಾಣೆಗೆ ಕರೆದೊಯ್ದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply