DAKSHINA KANNADA
ಪುತ್ತೂರು – ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಯುವಕನನ್ನು ಪೊಲೀಸ್ ವಶಕ್ಕೆ ನೀಡಿದ ಸಾರ್ವಜನಿಕರು

ಪುತ್ತೂರು ಜುಲೈ 22: ಸರಕಾರಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಂಗಳೂರು-ಪುತ್ತೂರು ಮಧ್ಯೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಆರೋಪಿಯನ್ನು ತಡೆದು, ಪುತ್ತೂರು ಮಹಿಳಾ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಈ ಘಟನೆಯ ಕುರಿತು ಮಾಹಿತಿ ತಿಳಿದು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ಮುಖಂಡರು ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಿಂದೂಪರ ಮುಖಂಡರು ಆರೋಪಿಸಿದ್ದಾರೆ.