Connect with us

    DAKSHINA KANNADA

    ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್ ಆರ್ ಟಿಸಿ ಕಂಡಕ್ಟರ್

    ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಕೆಎಸ್ ಆರ್ ಟಿಸಿ ಕಂಡಕ್ಟರ್

    ಪುತ್ತೂರು ಫೆಬ್ರವರಿ 17: ಬಸ್ಸಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಒಬ್ಬ ಮಹಿಳಾ ಪ್ರಯಾಣಿಕೆಯ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ.

    ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು. ಮಹಿಳೆ ಹಾಸನದಿಂದ ಪುತ್ತೂರಿಗೆ ಹೊರಟಿದ್ದರು. ಈ ವೇಳೆ ಟಿಕೆಟ್ ನೀಡುವ ನೆಪದಲ್ಲಿ ಕಂಡಕ್ಟರ್ ಮಹಿಳೆಯ ಪಕ್ಕದಲ್ಲಿ ಬಂದು ಕೂತಿದ್ದನು. ನಂತರ ಪಕ್ಕದಲ್ಲಿ ಕೂತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸುವುದಕ್ಕೆ ಶುರುಮಾಡಿದ್ದಾನೆ.

    ಮಹಿಳೆ ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಕಂಡಕ್ಟರ್ ಮಾತ್ರ ಮಹಿಳೆಯ ಕೈ ಹಿಡಿದುಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಕಂಡಕ್ಟರ್‌ಗೆ ಗೊತ್ತಾಗದಂತೆ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಕಂಡಕ್ಟರ್ ವರ್ತನೆಗೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಜೊತೆ ಕಂಡಕ್ಟರ್ ವರ್ತನೆಗೆ ಈಗ ತೀವ್ರ ಆಕ್ರೋಶ ವ್ಯಕ್ತವಾಗಿದೆ

    ವಿಡಿಯೋ ನೋಡಿದ ಕೆಎಸ್ಆರ್‌ಟಿಸಿ ಎಮ್.ಡಿ ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕಂಡಕ್ಟರ್ ಪುತ್ತೂರು ಡಿಪೋದಲ್ಲಿ ಕೆಲಸ ಮಾಡುತ್ತಾನೆ ಎಂದು ಗೊತ್ತಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply