Connect with us

    DAKSHINA KANNADA

    ಪುತ್ತೂರು : ಬಡ ಮಹಿಳೆಯ ಗುಡಿಸಲಿಗೆ ದುಷ್ಕರ್ಮಿಗಳಿಂದ ಬೆಂಕಿ, ನಗದು ಹಣ-ದಾಖಲೆಪತ್ರಗಳು ಬೆಂಕಿಗಾಹುತಿ..!

    ಪುತ್ತೂರು : ಬಡ ಮಹಿಳೆಯೊಬ್ಬಳು ವಾಸವಿದ್ದ ಗುಡಿಸಲೊಂದು ಬೆಂಕಿಹಾಗುತಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡದ  ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿ ಪಾದೆಡ್ಕ ಎಂಬಲ್ಲಿ ನಡೆದಿದೆ. ಗುಡಿಸಲಿಗೆ ಯಾರೋ ಬೆಂಕಿ ಹಚ್ಚಿರಬಹುದೆಂಬ ಶಂಕೆ ವ್ಯಕ್ತವಾಗಿದೆ.


    ಪಾದೆಡ್ಕ ನಿವಾಸಿ ಪದ್ಮಾವತಿ ಹಾಗೂ ಅವರ ಎಳೆಯ ಪ್ರಾಯದ ಪುತ್ರ ವಾಸ್ತವ್ಯವಿದ್ದ ಶೀಟ್ ಅಳವಡಿಸಿರುವ ಗುಡಿಸಲು ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮನೆಯೊಳಗೆ ಬ್ಯಾಗ್‌ವೊಂದರಲ್ಲಿ ಇರಿಸಲಾಗಿದ್ದ ರೂ.15 ಸಾವಿರ ನಗದು ಹಣ, ಆಧಾರ್ ಕಾರ್ಡ್ ಸಹಿತ ದಾಖಲೆ ಪತ್ರಗಳು, ದಿನಸಿ ಸಾಮಾಗ್ರಿಗಳು ಹಾಗೂ ಇನ್ನಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಗೋಡೆ ಇಲ್ಲದ ಗುಡಿಸಲಿನ ಸುತ್ತ ಅಳವಡಿಸಲಾಗಿದ್ದ ನೆಟ್ ಸಂಪೂರ್ಣ ಸುಟ್ಟು ಹೋಗಿದೆ. ಪದ್ಮಾವತಿ ಅವರ ಪತಿ ನಿಧನ ಹೊಂದಿದ್ದು, ಅವರು ತನ್ನ 8 ವರ್ಷದ ಪುತ್ರನೊಂದಿಗೆ ಈ ಗುಡಿಸಲಿನಲ್ಲಿ ವಾಸ್ತವ್ಯವಿದ್ದರು. ಪದ್ಮಾವತಿ ಅವರು ಎಂದಿನAತೆ ಶುಕ್ರವಾರ ಕೆಲಸಕ್ಕೆ ಹೋಗಿದ್ದ ವೇಳೆ ಸ್ಥಳೀಯರು ಅವರಿಗೆ ಕರೆ ಮಾಡಿ ಮನೆಗೆ ಬೆಂಕಿ ಬಿದ್ದಿರುವ ವಿಚಾರ ತಿಳಿಸಿದ್ದರು. ಕೂಡಲೇ ಅವರು ಮನೆಗೆ ಬಂದಿದ್ದರೂ ಆ ವೇಳೆಗಾಗಲೇ ಗುಡಿಸಲಿನ ಒಂದು ಭಾಗ ಬೆಂಕಿಗಾಹುತಿಯಾಗಿತ್ತು.
    ಗುಡಿಸಲು ಮನೆಗೆ ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ, ಎಸ್ಕೆಎಸ್ಸೆಸ್ಸೆಫ್ ಮುಖಂಡ ಅಶ್ರಫ್ ಸಾರೆಪುಣಿ ಅವರು ಕೂಡಲೇ ಕಾರ್ಯ ಪ್ರವೃತ್ತರಾಗಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸ್ಥಳೀಯರಾದ ಹುಕ್ರ ಎಂಬವರು ಬೆಂಕಿ ನಂದಿಸಲು ಸಹಕಾರ ನೀಡಿದ್ದರು. ಘಟನಾ ಸ್ಥಳಕ್ಕೆ ಕೆದಂಬಾಡಿ ಗ್ರಾಮ ಸಹಾಯಕ ಶ್ರೀಧರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಘಟನೆಯ ಸುತ್ತ ಅನುಮಾನ..?
    ಪದ್ಮಾವತಿ ಅವರ ಮನೆಗೆ ವಿದ್ಯುತ್ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಹಾಗಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಲು ಸಾಧ್ಯವಿಲ್ಲ, ಮನೆಯ ಒಲೆ ಒಂದು ಮೂಲೆಯಲ್ಲಿದ್ದು ಅಲ್ಲಿ ಯಾವುದೇ ಬೆಂಕಿ ಅವಘಡ ಆಗಿರುವ ಕುರುಹುಗಳು ಕಂಡು ಬಂದಿಲ್ಲ, ಮಾತ್ರವಲ್ಲದೇ ಒಲೆಯಲ್ಲಿ ಬೆಂಕಿಯೂ ಇರಲಿಲ್ಲ, ಒಲೆ ಇಲ್ಲದ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿರುವುದರಿAದ ಯಾರಾದರೂ ಉದ್ದೆಶಪೂರ್ವಕವಾಗಿ ಗುಡಿಸಲಿಗೆ ಬೆಂಕಿ ಹಚ್ಚಿರಬಹುದು ಎನ್ನುವ ಸಂಶಯ ಸ್ಥಳೀಯವಾಗಿ ವ್ಯಕ್ತವಾಗಿದೆ. ಘಟನೆ ಕುರಿತು ಪದ್ಮಾವತಿ ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ದಿಕ್ಕೇ ತೋಚಾದ ಮಹಿಳೆಯ ಅಳಲು :
    ಪದ್ಮಾವತಿ ಅವರ ಮನೆಗೆ ಗೋಡೆ ಇಲ್ಲ, ನಾಲ್ಕೂ ಬದಿಗೆ ನೆಟ್ ಅಳವಡಿಸಲಾಗಿತ್ತು. ಮನೆಗೆ ವಿದ್ಯುತ್ ಸಂಪರ್ಕ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲ. ಅವರು ತನ್ನ ೮ ವರ್ಷದ ಮಗನೊಂದಿಗೆ ಸಂಕಷ್ಟದ ಜೀವನ ಸಾಗಿಸುತ್ತಿದ್ದರು. ಈ ಘಟನೆಯಿಂದಾಗಿ ಆಘಾತಕ್ಕೊಳಗಾಗಿರುವ ಪದ್ಮಾವತಿ ಅವರು, ಇದ್ದ ರೂ 15 ಸಾವಿರ ನಗದು, ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳು ಸುಟ್ಟು ಭಸ್ಮವಾಗಿದ್ದು, ನಾವು ಇನ್ನೇನು ಮಾಡಬೇಕು, ನನ್ನಲ್ಲಿ ಒಂದೂ ರೂಪಾಯಿ ಹಣ ಕೂಡಾ ಇಲ್ಲ ಎನ್ನುತ್ತಾ ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡು ಬಂತು. ಯಾರಾದರೂ ದಾನಿಗಳು ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಅವರು ಅಂಗಲಾಚತೊಡಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply