LATEST NEWS
ಮುಲ್ಕಿ – ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಕುಂಜತ್ತೂರು ಬಾವಿಯಲ್ಲಿ ಪತ್ತೆ

ಮುಲ್ಕಿ ಎಪ್ರಿಲ್ 11: ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ.
ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕ ಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಂತೆ ಗುರುವಾರ ರಾತ್ರಿ ಕೇರಳ- ಕರ್ನಾಟಕ ಗಡಿ ಭಾಗದ ಕುಂಜತ್ತೂರು ಪದವು ಎಂಬಲ್ಲಿ ನ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಮೀಪದಲ್ಲಿ ಇವರ ಆಟೋ ರಿಕ್ಷಾ ಕೂಡಾ ಕಂಡು ಬಂದಿದೆ.

ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿರುವ ಮುಹಮ್ಮದ್ ಶರೀಫ್ ದಿನಾ ಬೆಳಗ್ಗೆ 10 ಗಂಟೆಗೆ ತನ್ನ ಮನೆಯಿಂದ ಕೊಟ್ಟಾರ ಚೌಕಿಗೆ ಬಂದು ಬಾಡಿಗೆಗೆ ರಿಕ್ಷಾ ಓಡಿಸುತ್ತಾರೆ. ತಡರಾತ್ರಿಯಾದರೂ ಸರಿ, ಮನೆಗೆ ಮರಳುತ್ತಾರೆ. ಆದರೆ ಬುಧವಾರ ಬೆಳಗ್ಗೆ ಮನೆಯಿಂದ ಹೊರಟು ಮಂಗಳೂರಿಗೆ ಬಂದಿದ್ದ ಮುಹಮ್ಮದ್ ಶರೀಫ್ ಗುರುವಾರ ತಡರಾತ್ರಿಯವರೆಗೂ ಮನೆಗೆ ಮರಳಲಿಲ್ಲ ಎನ್ನಲಾಗಿದೆ. ಹಾಗಾಗಿ ಹುಡುಕಾಟ ನಡೆಸಲಾಯಿತು. ಮುಸ್ಸಂಜೆಯ ವೇಳೆಗೆ ಕುಂಜತ್ತೂರು ಪದವು ಎಂಬಲ್ಲಿನ ಬಾವಿಯಲ್ಲಿ ಮುಹಮ್ಮದ್ ಶರೀಫ್‌ರ ಮೃತದೇಹವಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು, ಕೊಲೆ ಶಂಕೆ ವ್ಯಕ್ತಪಡಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
1 Comment