DAKSHINA KANNADA
ಉಪ್ಪಿನಂಗಡಿ – ನಾಪತ್ತೆಯಾಗಿದ್ದ ಯುವಕನ ಮೃತದೇಹ ತೋಟದ ಕೆರೆಯಲ್ಲಿ ಪತ್ತೆ

ಉಪ್ಪಿನಂಗಡಿ ಫೆಬ್ರವರಿ 25: ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ.
ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
