ಸುವರ್ಣ ತ್ರಿಭುಜ ಬೋಟ್ ಪತ್ತೆಗೆ ಕೇಂದ್ರ ಸರಕಾರಕ್ಕೆ ಮನವಿ

ಉಡುಪಿ ಜನವರಿ 3: ಉಡುಪಿ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರಿಕಾ ಬೋಟ್ ಹಾಗೂ ಮೀನುಗಾರರ ಪತ್ತೆಗಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಇವರ ನೇತೃತ್ವ ನಿಯೋಗ ಭೇಟಿ ಯಾಗಿ ಮನವಿ ಸಲ್ಲಿಸಿದೆ.

ನಿಯೋಗದ ಮನವಿಗೆ ಸ್ಪಂಧಿಸಿದ ಗೃಹ ಸಚಿವರಾದ ರಾಜನಾಥ್ ಸಿಂಗ್ ಕೂಡಲೇ ರಕ್ಷಣಾ ಕಾರ್ಯದರ್ಶಿಗಳಿಗೆ ಕೇಂದ್ರ ಸರ್ಕಾರದಿಂದಲೇ ಎಲ್ಲಾ ರೀತಿಯ ತನಿಖೆ ನಡೆಸಿ ಕಾಣೆಯಾದ ಬೋಟ್ ಮತ್ತು ಮೀನುಗಾರರನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದಾರೆ. ಮಹಾರಾಷ್ಟ್ರ, ಗೋವಾ ಗಡಿ ಮತ್ತು ಗುಜರಾತ್ ಗಡಿಯಲ್ಲೂ ಮತ್ತು ಸಮುದ್ರ ಸೇರಿದಂತೆ ಸಂಶಯಾಸ್ಪದವಾಗಿರುವ ಪ್ರತಿ ಕಡೆಗಳಲ್ಲೂ ಪತ್ತೆ ಹಚ್ಚುವ ಕಾರ್ಯ ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಮೀನುಗಾರಿಕಾ ಬೋಟ್ ನಾಪತ್ತೆಯಾಗಿ ಈಗಾಗಲೇ ಮೂರು ವಾರಗಳಾಗುತ್ತ ಬಂದರೂ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಮೀನುಗಾರರು ಆರೋಪಿಸಿದ್ದಾರೆ.

3 Shares

Facebook Comments

comments