LATEST NEWS
ಮಂಗಳೂರು – ಹಾಸ್ಟೆಲ್ ನಿಂದ ಎಸ್ಕೇಪ್ ಆಗಿದ್ದ ವಿಧ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ
ಮಂಗಳೂರು ಸೆಪ್ಟೆಂಬರ್ 24: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಿಂದ ನಾಪತ್ತೆಯಾಗಿದ್ದ ಮೂವರು ವಿಧ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಚೆನ್ನೈನಲ್ಲಿ ಪತ್ತೆಯಾದ ಮೂವರು ವಿದ್ಯಾರ್ಥಿನಿಯರನ್ನು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ.
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಅಸಮಾಧಾನಗೊಂಡಿದ್ದ ಈ ಮೂವರು ವಿದ್ಯಾರ್ಥಿನಿಯರು ಕಳೆದ ಬುಧವಾರ ಬೆಳಗ್ಗಿನ ಹೊತ್ತು ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದರು. ಅವರು ಹಾಸ್ಟೆಲ್‌ನಿಂದ ಹೊರಟು ಮಂಗಳೂರು ರೈಲ್ವೇ ಸ್ಟೇಷನ್‌ವರೆಗೆ ತೆರಳಿದ್ದ ಮಾಹಿತಿ ಲಭ್ಯವಾಗಿತ್ತು.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ವಿದ್ಯಾರ್ಥಿನಿಯರ ತಂಡ ಮಂಗಳೂರಿನಿಂದ ರೈಲಿನ ಮೂಲಕ ಕೊಯಂಬತ್ತೂರು ತೆರಳಿದ್ದರು. ಕೊಯಂಬತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಪ್ರಯಾಣ ಬೆಳಸಿ, ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ಪೋಷಕರು ತಮಗೆ ಖರ್ಚಿಗೆ ನೀಡಿದ್ದ ಹಣವನ್ನೇ ತಮ್ಮ ಪ್ರಯಾಣಕ್ಕೆ ಬಳಸಿಕೊಂಡಿದ್ದಾರೆ ಎಂದರು.
ಅವರ ಪೋಷಕರು ಹಾಗೂ ಕಾಲೇಜಿನ ಮುಖ್ಯಸ್ಥರ ಜತೆ ಮಾತುಕತೆ ನಡೆಸಿ ಮಕ್ಕಳ ಜತೆ ಸಮಾಲೋಚನೆ ನಡೆಸುವಂತೆ ತಿಳಿಸಲಾಗಿದೆ. ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್‌ಗಳಲ್ಲಿ ಇರುವ ಮಕ್ಕಳಿಗೆ ಎರಡು ಅಥವಾ ಮೂರು ತಿಂಗಳಿಗೊಮ್ಮೆ ಮಾತ್ರವೇ ಪೋಷಕರ ಭೇಟಿಗೆ ಅವಕಾಶ ನೀಡಲಾಗುತ್ತದೆ. ಕನಿಷ್ಠ ಸಮಯದಲ್ಲಿ ಮಕ್ಕಳಿಗೆ ಪೋಷಕರ ಜತೆ ಇರಲು ಅವಕಾಶ ನೀಡಿದರೆ ಉತ್ತಮ ಎಂದು ಅವರು ಹೇಳಿದರು.
You must be logged in to post a comment Login