Connect with us

    DAKSHINA KANNADA

    ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರು

    ಸುಬ್ರಹ್ಮಣ್ಯ, ಜನವರಿ 10: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ತೆರಳಿದ್ದಾರೆ.

    ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ.

    ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳನ್ನು, ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಭಾರತಿ ಮತ್ತವರ ಪ್ರಿಯಕರ ನಂದನ್‌ ಎಷ್ಟೇ ಹುಡುಕಾಡಿದರೂ ಸಿಕ್ಕಿರಲಿಲ್ಲ. ತಿಂಗಳ ಹಿಂದೆ ವೀಡಿಯೋ ಮಾಡಿ ಹರಿಯಬಿಟ್ಟಿದ್ದ ಭಾರತಿ, ತಾನು ಪ್ರಿಯಕರನೊಂದಿಗೆ ಇರುವುದಾಗಿ ತಿಳಿಸಿದ್ದು, ತನ್ನನ್ನು ಹುಡುಕುವ ಕಾರ್ಯ ಮಾಡಬೇಡಿ ಎಂದು ಕೇಳಿ ಕೊಂಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply