Connect with us

    UDUPI

    ಬ್ರಹ್ಮಾವರ – ಯುವತಿ ನಾಪತ್ತೆ

    ಉಡುಪಿ, ಡಿಸೆಂಬರ್ 8 : ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಕೋಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿ  ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾ ಡೇಸಾ (26). ಈಕೆ  ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply