LATEST NEWS
ಕೇರಳ ಹೈಕೋರ್ಟ್ ಆದೇಶ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೆರಿದ ಕಾಂಗ್ರೇಸ್ ಮುಖಂಡ ಮಿಥುನ್ ರೈ

ಕೇರಳ ಹೈಕೋರ್ಟ್ ಆದೇಶ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೆರಿದ ಕಾಂಗ್ರೇಸ್ ಮುಖಂಡ ಮಿಥುನ್ ರೈ
ಮಂಗಳೂರು ಎಪ್ರಿಲ್ 3: ಕೇರಳದ ರೋಗಿಗಳಿಗೆ ಕರ್ನಾಟಕದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಬಂಧನವನ್ನು ತೆಗೆದುಹಾಕುವಂತೆ ಕೇರಳ ಹೈಕೋರ್ಟ್ ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಈ ಮೇಲ್ಮನವಿ ಅರ್ಜಿಯನ್ನು ಮಿಥುನ್ ತಮ್ಮ ವಕೀಲರಾದ ಸಂಜಯ್ ಎಂ ನುಳಿ ಮುಖಾಂತರ ಸಲ್ಲಿಸಿದ್ದಾರೆ. ಜಸ್ಟಿಸ್ ಎಲ್.ನಾಗೇಶ್ವರ ರಾವ್ ಹಾಗೂ ಜಸ್ಟಿಸ್ ದೀಪಕ್ ಗುಪ್ತಾ ಅವರ ಪೀಠ ಈ ಪ್ರಕರಣವನ್ನು ಕರ್ನಾಟಕ ಸರಕಾರ ಸಲ್ಲಿಸಿರುವ ಇಂತಹುದೇ ಇನ್ನೊಂದು ಅಪೀಲಿನ ಜತೆಗೆ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಕೇರಳ-ಕರ್ನಾಟಕ ಗಡಿಯನ್ನು ಮುಚ್ಚಿದ ಕರ್ನಾಟಕ ಸರಕಾರದ ಕ್ರಮವನ್ನು ತಮ್ಮ ಅಪೀಲಿನಲ್ಲಿ ಸಮರ್ಥಿಸಿಕೊಂಡಿರುವ ಮಿಥುನ್, ನೆರೆಯ ಕಾಸರಗೋಡು ಜಿಲ್ಲೆಯಿಂದ ಮಂಗಳೂರಿಗೆ ದೊಡ್ಡ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುವುದರಿಂದ ಸದ್ಯದ ಕೊರೋನ ವೈರಸ್ ಸೋಂಕು ಸಮಸ್ಯೆಯನ್ನು ನಿಭಾಯಿಸುವ ಸಮಯದಲ್ಲಿ ಇದು ಇಲ್ಲಿನ ಆರೋಗ್ಯ ಸೇವಾ ಸಂಸ್ಥೆಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.