Connect with us

  LATEST NEWS

  ಮಿಥುನ್ ರೈ ವಿವಾದಾತ್ಮಕ ಹೇಳಿಕೆ ರಘುಪತಿ ಭಟ್ ತಿರುಗೇಟು…!!

  ಉಡುಪಿ ಮಾರ್ಚ್ 08: ಚುನಾವಣೆ ಸಂದರ್ಭದಲ್ಲೇ ಭಾರೀ ವಿವಾದವನ್ನು ಕಾಂಗ್ರೇಸ್ ಮುಖಂಡ ಮಿಥುನ್ ರೈ ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಸಂಬಂಧಪಟ್ಟಂತೆ ಮಿಥುನ್ ರೈ ಹೇಳಿಕೆ ಚರ್ಚೆಗೆ ಕಾರಣವಾಗಿದೆ.


  ಮೂಡಬಿದರೆ ವಿಧಾನಸಭಾ ಕ್ಷೇತ್ರ ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ನಮ್ಮೂರ ಮಸೀದಿ ನೋಡಬನ್ನಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದಾರೆ. ಈ ವೇಳೆ ಉಡುಪಿ ಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲಿಂ ರಾಜರು ನೀಡಿದ್ದಾರೆ ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.


  ಮಿಥನ್ ರೈ ಹೇಳಿಕೆಗೆ ಉಡುಪಿ ಶಾಸಕ ರಘುಪತಿ ಭಟ್ ತಿರುಗೇಟು ಕೊಟ್ಟಿದ್ದಾರೆ. ಅಯೋಧ್ಯೆ, ಕಾಶಿ – ಮಥುರಾದಲ್ಲಿ ನಿಮ್ಮ ಅಣ್ಣ ತಮ್ಮಂದಿರು ಏನು ಮಾಡಿದ್ದಾರೆ ಎಂದು ಇಡೀ ದೇಶಕ್ಕೆ ಗೊತ್ತಿದೆ. ಸತ್ಯ ತಿಳಿದುಕೊಂಡು ಮಾತನಾಡಿ ಎಂದಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply