LATEST NEWS
ಡಿಕೆಶಿ ಸಲಹೆ ಮೆರೆಗೆ ಯುವ ಕಾಂಗ್ರೇಸ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ಮಿಥುನ್ ರೈ

ಮಂಗಳೂರು ಜನವರಿ 10: ರಾಜ್ಯ ಯುವ ಕಾಂಗ್ರೇಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಕಣದಿಂದ ದ.ಕ ಯುವ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷ ಮಿಥುನ್ ರೈ ಹಿಂದಕ್ಕೆ ಸರಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ಅವರು ಡಿಕೆಶಿ ಅವರ ಸಲಹೆ ಮೇರೆಗೆ ಮಿಥುನ್ ರೈ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ ಅವರು “ಆತ್ಮೀಯರೇ, ನಿಮಗೆಲ್ಲರಿಗೂ ತಿಳಿದಿರುವಂತೆ ದಿನಾಂಕ ಜನವರಿ 10,11,12ರಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆ ನಡೆಯಲಿದೆ. ನಾನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆಪ್ತನಾಗಿರುವ ಕಾರಣ, ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದಂತೆ ನಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆಯಿಂದ ಹಿಂದೆ ಸರಿಯುತ್ತಿದ್ದೇನೆ. ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಲು ವಿನಂತಿ” ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಜ.10ರಿಂದ 12ರವರೆಗೆ ಆನ್‌ಲೈನ್ ಮೂಲಕ ಚುನಾವಣೆ ನಡೆಯಲಿದೆ.
