DAKSHINA KANNADA
ದೇವಸ್ಥಾನ ವಿಚಾರದಲ್ಲಿ ನಮ್ಮನ್ನ ಕೆಣಕಲು ಬರಬೇಡಿ – ಬಿಜೆಪಿ ಮುಖಂಡರಿಗೆ ಶಾಸಕ ಅಶೋಕ್ ರೈ ವಾರ್ನಿಂಗ್
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಪುತ್ತೂರು ಪೆಬ್ರವರಿ 11: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರಿನ ಮಹತೋಭಾರ ದೇವಸ್ಥಾನದಲ್ಲಿ ದೊಡ್ಡ ಮಟ್ಟದ ಕರಸೇವೆ ನಡೆದಿದೆ. ಮಾಸ್ಟರ್ ಪ್ಲಾನ್ ಮೂಲಕ ಕ್ಷೇತ್ರದ ಅಭಿವೃದ್ಧಿ ನಡೆಸಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನಿರ್ಧರಿಸಿರುವ ಹಿನ್ನಲೆಯಲ್ಲಿ ದೇವಸ್ಥಾನದ ಆಸುಪಾಸಿನಲ್ಲಿದ್ದ ಮನೆಗಳನ್ನು ನೆಲಸಮಗೊಳಿಸಲಾಗಿದೆ.ಈ ನೆಲಸಮಗೊಳಿಸಿದ ಮನೆಗಳ ಅವಶೇಷಗಳ ತೆರವಿಗಾಗಿ ಈ ಕರಸೇವೆಯನ್ನು ಕೈಗೊಳಆರೋಪಿಸಲಾಗಿದೆ.ಸಾವಿರ ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಸೇವೆಯಲ್ಲಿ ಪಾಲ್ಗೊಂಡಿದ್ದರು.
ವಿವಾದಕ್ಕೆ ಕಾರಣವಾಗಿದ್ದ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸಿನಲ್ಲಿದ್ದ ಮನೆಗಳ ತೆರವು ಜಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕರಸೇವೆ ನಡೆದಿದೆ. ಏಳು ಮನೆಗಳಲ್ಲಿದ್ದ ಕುಟುಂಬಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಮತ್ತು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್ ತಮ್ಮ ಸ್ವಂತ ಹಣದಲ್ಲಿ ಪರಿಹಾರವನ್ನು ನೀಡಿದ್ದಾರೆ. ಆದರೆ ಕೆಲವು ಕುಟುಂಬಗಳು ಈ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಲನ್ನೂ ಏರಿದ್ದಾರೆ. ಈ ನಡುವೆ ನೆಲಸಮಗೊಳಿಸಲಾದ ಮನೆಗಳ ಅವಶೇಷಗಳನ್ನು ಕರಸೇವೆಯ ಮೂಲಕ ತೆರವುಗೊಳಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಬಹುತೇಕ ಪುತ್ತೂರಿನ ಎಲ್ಲಾ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಎಲ್ಲಾ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳೂ ಈ ಕರಸೇವೆಯಲ್ಲಿ ಭಾಗವಹಿಸಿದ್ದಾರೆ. ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ವಿರೋಧಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಉತ್ತರವನ್ನೂ ನೀಡಿದ್ದಾರೆ. ಕಾಂಗ್ರೇಸ್ ಪಕ್ಷವನ್ನು ಗೂಂಡಾಗಿರಿ ಪಕ್ಷ ಎನ್ನುವ ರೀತಿಯಲ್ಲಿ ಬಿಂಬಿಸಲಾಗುತ್ತಿದ್ದು, ಬಿಜೆಪಿ ನಾಯಕರು ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ಯಾರ ಮಾತನ್ನೂ ಕೇಳುವುದಿಲ್ಲ. ನಮ್ಮನ್ನು ಕೆಣಕಲು ಬರಬೇಡಿ. ಸಮ್ಮನೆ ಇರಿ ಎನ್ನುವ ಎಚ್ಚರಿಕೆಯನ್ನೂ ಶಾಸಕ ಅಶೋಕ ಕುಮಾರ್ ರೈ ಬಿಜೆಪಿ ಮುಖಂಡರಿಗೆ ನೀಡಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ವಾರದ ಮಧ್ಯದಲ್ಲಿ ನಡೆದ ಈಯ ಕರಸೇವೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು,ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಶಾಸಕರ ಕಾರ್ಯಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ. ಬೆಳಿಗ್ಗೆಯಿಂದಲೇ ಮಹಿಳೆಯರು ಕರಸೇವೆಯಲ್ಲಿ ಭಾಗವಹಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಯಲ್ಲಿ ತಮ್ಮ ಪಾಲೂ ಇರಲಿ ಎಂದು ಭಾಗವಹಿಸಿದ್ದಾರೆ.
ಸರಕಾರದಿಂದ ಹೆಚ್ಚಿನ ಅನಿದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ಯೋಜನೆ ಶಾಸಕರ ಮುಂದಿದೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮೇಲಾಟಕ್ಕೂ ಇದು ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಮತ್ತಷ್ಟು ಉಲ್ಬಸುವ ಸಾಧ್ಯತೆಗಳೂ ಹೆಚ್ಚಾಗಿದೆ.