Connect with us

LATEST NEWS

ಫಾಝಿಲ್ ಕೊಲೆ ಪ್ರಕರಣದಲ್ಲಿ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿದರೆ ಪ್ರತಿಭಟನೆ – ಶಾಸಕ ಭರತ್ ಶೆಟ್ಟಿ

ಮಂಗಳೂರು ಜುಲೈ31: ಸುರತ್ಕಲ್ ನಲ್ಲಿ ನಡೆದ ಫಾಝಿಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಪೊಲೀಸ್ ಇಲಾಖೆ ವಿರುದ್ದ ದೂರಿದ್ದಾರೆ.


ಕೊಲೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳು ಇದ್ದರೆ ಹಂತಕರನ್ನು ಬಂಧಿಸಿ ಅದು ಬಿಟ್ಟು ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸಿದರೆ ನಗರ ಪೊಲೀಸ್‌ ಕಮಿಷನರ್‌ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ. ಪೊಲೀಸರ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡುತ್ತೇನೆ’ ಎಂದೂ ಅವರು ಹೇಳಿದ್ದಾರೆ.

ಶಾಸಕರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌, ‘ನಮಗೆ ಆರೋಪಿಗಳಷ್ಟೇ ಮುಖ್ಯ. ನಾವು ಅವರು ಯಾವ ಸಂಘಟನೆಯವರು ಎಂದೆಲ್ಲಾ ನೋಡಲು ಹೋಗುವುದಿಲ್ಲ‘ ಎಂದು ಸ್ಪಷ್ಟಪಡಿಸಿದರು.

Advertisement
Click to comment

You must be logged in to post a comment Login

Leave a Reply