LATEST NEWS
ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ಕಾನೂನು ಮೂಲಕ ಮರೆಯಲಾಗದ ಪಾಠ ಕಲಿಸುತ್ತೇವೆ – ಶಾಸಕ ಭರತ್ ಶೆಟ್ಟಿ

ಮಂಗಳೂರು ಅಕ್ಟೋಬರ್ 23: ಹಿಂದೂ ದೇವಸ್ಥಾನಗಳ ರಾತ್ರಿ ವೇಳೆ ಹೇಡಿಗಳಂತೆ ನುಗ್ಗಿ ಭಗ್ನಗೊಳಿಸುವವರಿಗೆ ಕ್ಷಮೆ ಇಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.
ಕೂಳೂರಿನಲ್ಲಿ ನಾಗ ಮೂಲಸ್ಥಾನ ವಿಗ್ರಹಕ್ಕೆ ಹಾನಿಗೊಳಿಸಿದ ಘಟನೆಯ ಬಗ್ಗೆ ಮಾತನಾಡಿದ ಅವರು ನಮ್ಮನ್ನು ಧಾರ್ಮಿಕ ಭಾವನೆಗಳ ಮೂಲಕ ಕೆಣಕಿದರೆ ನಾವು ಕಾನೂನು ಮೂಲಕ ಮರೆಯಲಾಗದ ಪಾಠ ಕಲಿಸುತ್ತೇವೆ ಎಂದು ಕಿಡಿಗೇಡಿಗಳಿಗೆಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆಯ ಗುಪ್ತಚರ ವ್ಯವಸ್ಥೆಯನ್ನು ಬಲಪಡಿಸಿ, ಹಿಂದೂ ಪೂಜಾ ಸ್ಥಳಗಳನ್ನು ಭಗ್ನಗೊಳಿಸುವ ಮೂಲಕ ಕ್ಷೇತ್ರದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ದ ವಿಶೇಷ ಕಾರ್ಯಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.