LATEST NEWS
ವಿಧಾನಸಭೆ ಚುನಾವಣೆ – ಮಂಗಳೂರು ದಕ್ಷಿಣ ಕ್ಷೇತ್ರದಿಂದ ಐವನ್, ಉತ್ತರಕ್ಕೆ ಬಾವಾ ಆಕಾಂಕ್ಷಿ
ಮಂಗಳೂರು ನವೆಂಬರ್ 16: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆ ಕಾಂಗ್ರೇಸ್ ನಲ್ಲಿ ಇದೀಗ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಪಕ್ಷದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು, ಇದೀಗ ಅರ್ಜಿ ಸಲ್ಲಿಸಲು ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ಈ ನಡುವೆ 224 ಕ್ಷೇತ್ರಗಳಿಗೆ 8000 ಅರ್ಜಿಗಳು ಸಲ್ಲಿಕೆಯಾಗಿದೆ. ಒಟ್ಟು 1150 ಅರ್ಜಿಗಳು ಆಕಾಂಕ್ಷಿಗಳು ಪಡೆದುಕೊಂಡಿದ್ದಾರೆ. ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಮಾರ್ ಕೂಡಾ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಐವನ್ ಡಿಸೋಜಾ, ಉತ್ತರಕ್ಕೆ ಮೊಯಿದೀನ್ ಬಾವಾ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ತೆಗೆದುಕೊಳ್ಳುವಾಗ 5 ಸಾವಿರ ರೂ. ಶುಲ್ಕ ಪಾವತಿಸಬೇಕು. ಭರ್ತಿ ಮಾಡಿದ ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ. ‘ಡಿ.ಡಿ’ ಮತ್ತು ಕಾಂಗ್ರೆಸ್ ಸದಸ್ಯತ್ವ ನೋಂದಣಿ ಮಾಡಿಸಿದ ವಿವರ ಒದಗಿಸಬೇಕು. ಎಸ್‌ಸಿ, ಎಸ್‌ಟಿ ವರ್ಗದವರಿಗೆ ಶುಲ್ಕದಲ್ಲಿಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.