BELTHANGADI
‘ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಹೇಳಿಕೆ ಸಮರ್ಥಿಸಿ ಪುನರುಚ್ಚರಿಸಿದ ಶಾಸಕ ಹರೀಶ್ ಪೂಂಜಾ..!

ಮಂಗಳೂರು : ‘ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಕೊಟ್ಟ ಹೇಳಿಕೆಯನ್ನು ನಾನು ಸಮರ್ಥನೆ ಮಾಡುತ್ತೇನೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪುನರುಚ್ಚರಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪೂಂಜಾ ಅವರು ಸಂಸದ ಡಿಕೆ ಸುರೇಶ್ ಕುಮಾರ್ ಹೇಳಿಕೆಗೆ ಸಾಮಾನ್ಯ ರೀತಿ ಖಂಡನೆ ಮಾಡಿದರೆ ಅವರಿಗೆ ಅರ್ಥ ಆಗಲ್ಲ , ಹಾಗಾಗಿ ಈ ರೀತಿಯ ಹೇಳಿಕೆ ನೀಡಿ ಮನವರಿಕೆ ಮಾಡಲು ಪ್ರಯತ್ನಿಸಿದ್ದೇನೆ ಮತ್ತು ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬುವುದನ್ನು ನಾನು ಸಮರ್ಥನೆ ಮಾಡುತ್ತೇನೆ ಎಂದರು. ಹಿಂದೂಗಳ ತೆರಿಗೆಯನ್ನು ಹಿಂದೂಗಳಿಗೆ ಅಭಿವೃದ್ಧಿ ಮಾಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿದೆ? ಉತ್ತರ- ದಕ್ಷಿಣ ಭಾರತ ಅಂತಾ ವಿಭಜನೆ ಮಾಡಲು ಕಾಂಗ್ರೆಸ್ ಹೊರಟಿದೆ. ಹಿಂದೂಗಳ ತೆರಿಗೆಯನ್ನು ಲೆಕ್ಕ ಹಾಕೋಕೆ ಕಷ್ಟವೇ ಇಲ್ಲ. ಪ್ರತಿಯೊಬ್ಬನ ಹೆಸರಿನ ಮುಂದೆ ಅವನ ಧರ್ಮವೂ ಉಲ್ಲೇಖವಾಗಿರುತ್ತದೆ. ಸಿಂಗಲ್ ಟ್ಯಾಪ್ ನಲ್ಲಿ ತೆರಿಗೆಯನ್ನು ವಿಭಾಗಿಸಬಹುದಾಗಿದೆ. ಕಾಂಗ್ರೆಸ್ ತೆರಿಗೆ ವಿಚಾರ ಒಂದು ಕ್ಷುಲ್ಲಕ ವಿಚಾರವಾಗಿದ್ದು ಈ ವಿಚಾರವನ್ನು ಇಟ್ಕೊಂಡು ದೇಶ ವಿಭಜನೆಯನ್ನು ಮಾಡಲು ಹೊರಟಿದೆ ಎಂದು ನೇರಾವಾಗಿ ಕಾಂಗ್ರೆಸ್ ವಿರುದ್ದ ಹರಿಹಾಯ್ದರು.
