Connect with us

BELTHANGADI

ನವಗುಳಿಗ ಕೋಲ ಸೇವೆ..! : ಚುನಾವಣಾ ಪೂರ್ವದ ಹರಕೆ ತೀರಿಸಿದ ಶಾಸಕ ಹರೀಶ್ ಪೂಂಜ

Share Information

ಬೆಳ್ತಂಗಡಿ, ಮಾರ್ಚ್ 15 : ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ‌.
ಹೌದು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವಗುಳಿಗರಿಗೆ ಕೋಲ ನೀಡುವೆನೆಂದು ಶಾಸಕ ಕಳೆದ ಚುನಾವಣಾ ಪೂರ್ವದಲ್ಲಿ ಹರಕೆ ಹೊತ್ತಿದ್ದರು‌. ಈ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಈ ಕೋಲ ಸೇವೆಯನ್ನು ನೋಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಕೋಲ ಸೇವೆಯನ್ನು ನೀಡಿದರು.
ತುಳುನಾಡಿನಲ್ಲಿ ನವಗುಳಿಗ ದೈವಗಳು ನೆಲೆಯಾದ ಏಕೈಕ ಕ್ಷೇತ್ರ ಬರ್ಕಜೆ. ಇಲ್ಲಿ ಹರಕೆ ಹೊತ್ತರೆ ಭಕ್ತರ ಮನಸಂಕಲ್ಪ ಈಡೇರುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಹರೀಶ್ ಪೂಂಜಾ ಅವರು ಇಲ್ಲಿ ಹರಕೆ ಹೊತ್ತಿದ್ದರು. ಇದೀಗ ನವಗುಳಿಗರಿಗೆ ಕೋಲ ನೀಡಿದ್ದಾರೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನವಗುಳಿಗ ದೈವಗಳ ಕೋಲ ಸೇವೆಯನ್ನು ಕಣ್ತುಂಬಿಕೊಂಡರು.

ನವಗುಳಿಗ ದೈವಗಳಿಗೆ ವಿಶೇಷವಾಗಿ ಗಗ್ಗರ ಸೇವೆ ನಡೆಯಿತು. ಕ್ಷೇತ್ರಕ್ಕೆ ಅಗಮಿಸಿದ ಶಾಸಕ ಹರೀಶ್ ಪೂಂಜರನ್ನು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಅವರು ಕ್ಷೇತ್ರದ ಪರವಾಗಿ ಗೌರವಿಸಿದ್ರು.


Share Information
Advertisement
Click to comment

You must be logged in to post a comment Login

Leave a Reply