KARNATAKA
ಶಾಸಕ ಜಿ.ಟಿ. ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ನಿಧನ

ಮೈಸೂರು ಮೇ 15: ಶಾಸಕ ಜಿ.ಟಿ. ದೇವೇಗೌಡರ ಅವರ ಮೊಮ್ಮಗಳು 3 ವರ್ಷದ ಗೌರಿ ಅನಾರೋಗ್ಯದಿಂದ ನಿಧನಳಾಗಿದ್ದಾಳೆ.
ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು 3 ವರ್ಷದ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯರಾತ್ರಿ ನಿಧನ ಹೊಂದಿದ್ದಾಳೆಂದು ತಿಳಿದುಬಂದಿದೆ.

ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಭಾನುವಾರ ಮಧ್ಯಾಹ್ನ 12ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.