LATEST NEWS
ಶಾಂತಿ ಕಾಪಾಡುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ
ಶಾಂತಿ ಕಾಪಾಡುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ
ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಉಂಟಾದ ಘರ್ಷಣೆಯ ಕುರಿತು ಶಾಸಕ ಕಾಮತ್ ಸಾರ್ವಜನಿಕರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ಶಾಂತವಾಗಿದ್ದ ಮಂಗಳೂರಿನಲ್ಲಿ ಮತ್ತೆ ಅಶಾಂತಿ ಸೃಷ್ಟಿಯಾಗುವುದು ಬೇಡ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಬೇಡಿ. ಶಾಂತಿ ಸಮನ್ವಯ ಬೆಳೆಸುವ ನಿಟ್ಟಿನಲ್ಲಿ ಯಾರೂ ಕೂಡ ವದಂತಿಗಳಿಗೆ ಹಾಗೂ ಪ್ರಚೋದನೆಗೆ ಒಳಗಾಗದೆ ಶಾಂತಿಯಿಂದಿರಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಹಾಗೂ ಇಲಾಖೆಯ ಅಧಿಕಾರಿಗಳೂ ಕೂಡ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.