Connect with us

    LATEST NEWS

    ಉಡುಪಿ ಜಿಲ್ಲೆಯ ಸರಕಾರಿ ನೌಕರರಿಂದ ಸಾರ್ವಜನಿಕರಿಗೆ ಉತ್ತಮ ಸೇವೆ: ರಘುಪತಿ ಭಟ್

    ಉಡುಪಿ; ಜನವರಿ 15: ರಾಜ್ಯದ ಇತರೇ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು , ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.   ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ,ಜಿಲ್ಲಾ ಸರಕಾರಿ ನೌಕರರ ಸಂಘದ 2022 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ 7500 ಕ್ಕೂ ಅಧಿಕ ಸರಕಾರಿ ನೌಕರರಿದ್ದು, ಜಿಲ್ಲಾ ಸರಕಾರಿ ನೌಕರರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಜಾಗ ನೀಡುವಲ್ಲಿ ಸರ್ಕಾರದ ಮಟ್ಟದಲ್ಲಿ ವಿಶೇಷವಾಗಿ ಪ್ರಯತ್ನಿಸುವುದಾಗಿ ತಿಳಿಸಿದ ಶಾಸಕರು, ಸರಕಾರಿ ನೌಕರರ ಪ್ರತಿಭಾವಂತ ಮಕ್ಕಳು ಅಖಿಲ ಭಾರತ ಮತ್ತು ಕರ್ನಾಟಕ ಆಡಳಿತ ಸೇವೆಯಲ್ಲಿ ಸೇರ್ಪಡೆಗೊಳ್ಳಬೇಕು ಈ ಬಗ್ಗೆ ನೌಕರರು ತಮ್ಮ ಮಕ್ಕಳನ್ನು ಪ್ರೇರೇಪಿಸಬೆಕು ಎಂದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಮಾತನಾಡಿ, ನೌಕರರು ತಮ್ಮ ಕರ್ತವ್ಯದ ಜೊತೆಗೆ ಮಕ್ಕಳಿಗೆ ಅಗತ್ಯ ಸಮಯ ಮೀಸಲಿಡಬೇಕು ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸಬೇಕು ಎಂದರು.

     

    ರಾಜ್ಯ ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಷಡಾಕ್ಷರಿ ಮಾತನಾಡಿ, ಸಂಘದ ವತಿಯಿಂದ ಎಸ್.ಎಸ್.ಎಲ್.ಪಿ. ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರತಿವರ್ಷ 10000 ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದರು. ಸರ್ಕಾರಿ ನೌಕರರ ಅಭಿವೃಧಿಗಾಗಿ ಸಂಘಧ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಕಾರ್ಯನಿರ್ವಹಿಸುತ್ತಿದ್ದು, ಆಸ್ತಿ ಖರೀದಿ ವಾರ್ಷಿಕ ವರದಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ಕ್ಕೆ ನಿಗಧಿಪಡಿಸಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣವಾಗುವ ಅವಧಿಯನ್ನು 2023 ರ ಡಿಸೆಂಬರ್ 31 ರೊಳಗೆ ವಿಸ್ತರಿಸಿದೆ. ಕೆ.ಜಿ.ಐ.ಡಿ. ಯಲ್ಲಿ ಆನ್‌ಲೈನ್ ವ್ಯವಸ್ಥೆ ಮಾಡಿದೆ. ನೌಕರರು ಮತ್ತು ಅವರ ಕುಟುಂಬ ವರ್ಗದವರ ಉಚಿತ ಚಿಕಿತ್ಸೆಗೆ ಫೆಬ್ರವರಿಯಲ್ಲಿ ಕ್ಯಾಷ್ ಲೆಸ್ ವ್ಯವಸ್ಥೆ ಜಾರಿಗೆ ಬರಲಿದ್ದು, ಈ ಮೂಲಕ ಆರ್ಥಿಕ ಮಿತಿಯಿಲ್ಲದೇ ಚಿಕಿತ್ಸೆ ಪಡೆಯಬಹುದು ಎಂದರು.

    ನೌಕರರು ಕರ್ತವ್ಯದ ಅವಧಿಯಲ್ಲಿ ಮರಣ ಹೊಂದಿದರೆ 1 ಕೋಟಿ ಪರಿಹಾರ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ, ಮನೆ ಮತ್ತು ವಿದ್ಯಾಭ್ಯಾಸ ಸಾಲದಲ್ಲಿ ರಿಯಾಯತಿ ನೀಡುವ ಬಗ್ಗೆ ಸರಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದರು. ಮಾರ್ಚ್ ನಲ್ಲಿ ಹೊಸ ವೇತನ ಆಯೋಗ ಜಾರಿಗೆ ಬಂದ ನಂತರ ಎನ್.ಪಿ.ಎಸ್. ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

     

    Share Information
    Advertisement
    Click to comment

    You must be logged in to post a comment Login

    Leave a Reply