LATEST NEWS
ಉಡುಪಿ ಶಾಸಕ ರಘುಪತಿ ಭಟ್ ಸಹೋದರ ರವೀಂದ್ರ ನಿಧನ
ಉಡುಪಿ ಫೆಬ್ರವರಿ 10; ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ಸಹೋದರ ಕೆ ರವೀಂದ್ರ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಸಾಂಗ್ಲಿಯ ಹೋಟೆಲ್ ಉದ್ಯಮಿಯಾಗಿರುವ ಕೆ ರವೀಂದ್ರ ಬಾರಿತ್ತಾಯ(60 ವರ್ಷ) ಅವರು ಕಳೆದ ಕೆಲದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಸಾಂಗ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವ ರವೀಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಮೂವರು ಸಹೋದರರು, ಪತ್ನಿ, ಇಬ್ಬರು ಪುತ್ರಿಯರು ಓರ್ವ ಪುತ್ರನನ್ನು ಅಗಲಿದ್ದಾರೆ.